ದರ್ಶನ್ ಗೆ ಜೈಲೇ ಗತಿ: ಪತ್ನಿ ವಿಜಯಲಕ್ಷ್ಮಿ ದೇವಾಲಯ ಸುತ್ತಿದರೂ, ಡಿಸಿಎಂ ಭೇಟಿಯಾದರೂ ನೋ ಯೂಸ್

Krishnaveni K

ಗುರುವಾರ, 1 ಆಗಸ್ಟ್ 2024 (16:02 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತಷ್ಟು ದಿನಗಳವರೆಗೆ ಜೈಲು ವಾಸ ಅನುಭವಿಸಲೇಬೇಕಾಗಿದೆ. ಇಂದು ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ.

ಇಂದಿಗೆ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರು ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ತೀರ್ಪು ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ಇಂದು ನ್ಯಾಯಾಧೀಶರ ಮುಂದೆ ಹಾಜರಿ ಹಾಕಿದ್ದಾರೆ. ನಾಲ್ವರು ತುಮಕೂರು ಜೈಲಿನಲ್ಲಿದ್ದರೆ ಉಳಿದ 13 ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿದ್ದಾರೆ. ಇವರೆಲ್ಲರ ಹಾಜರಾತಿ ಪಡೆದ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಆಗಸ್ಟ್ 14 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ನೀಡಿದರು.

ದರ್ಶನ್ ಜೈಲು ಪಾಲಾದ ದಿನದಿಂದ ಪತ್ನಿ ವಿಜಯಲಕ್ಷ್ಮಿ ಅವರನ್ನು ಬಿಡಿಸಿಕೊಂಡು ಬರಲು ಪ್ರಭಾವಿಗಳ ಮೂಲಕ, ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ತಮ್ಮಿಂದಾದ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಇದುವರೆಗೆ ಯಾವುದಕ್ಕೂ ಫಲ ಸಿಕ್ಕಿಲ್ಲ. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನೂ ವಿಜಯಲಕ್ಷ್ಮಿ ಭೇಟಿ ಮಾಡಿ ಸಹಾಯ ಕೇಳಿದ್ದರು. ಆದರೆ ಯಾವುದೂ ಫಲ ಕೊಟ್ಟಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ