ರೇಣುಕಾಸ್ವಾಮಿ ಕೇಸ್: ದರ್ಶನ್ ಆಂಡ್ ಗ್ಯಾಂಗ್ ಇಂದು ಪರಪ್ಪನ ಅಗ್ರಹಾರಕ್ಕೆ

Krishnaveni K

ಶನಿವಾರ, 15 ಜೂನ್ 2024 (09:51 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ.

ದರ್ಶನ್ ಮತ್ತು ಸಹಚರರನ್ನು ಇಂದು ಪೊಲೀಸರು ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮತ್ತೊಮ್ಮೆ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಸ್ಥಳ ಮಹಜರು ಪ್ರಕ್ರಿಯೆ, ತಪ್ಪೊಪ್ಪಿಗೆ ಹೇಳಿಕೆ ಎಲ್ಲಾ ಪಡೆದುಕೊಂಡಿರುವುದರಿಂದ ಇಂದು ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸುವ ಸಾಧ್ಯತೆಯಿದೆ.

ಹೀಗಾದಲ್ಲಿ ದರ್ಶನ್ ಆಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಆ ಬಳಿಕವಷ್ಟೇ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಎಲ್ಲಾ ಸಾಕ್ಷ್ಯಗಳೂ ಆರೋಪಿಗಳಿಗೆ ಎದುರಾಗಿದ್ದು, ಜಾಮೀನು ಮಂಜೂರಾಗುವುದು ಕಷ್ಟ.

ಹೀಗಾಗಿ ಸದ್ಯದ ಮಟ್ಟಿಗೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸಬೇಕಾಗುತ್ತದೆ. ದರ್ಶನ್ ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಅವರಿಗೆ ಜಾಮೀನು ನೀಡಿದರೆ ವಿಚಾರಣೆ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಬಿಡುಗಡೆ ಮಾಡದಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ