ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದೆ. ಇದರ ಬೆನ್ನಲ್ಲೇ ಡಿ ಗ್ಯಾಂಗ್ ಈಗ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದೆ.
ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡುತ್ತಿದ್ದಂತೇ ಇಂದು ದರ್ಶನ್ ತೂಗುದೀಪ, ಪವಿತ್ರಾ ಗೌಡ, ಲಕ್ಷ್ಮಣ್, ಜಗದೀಶ್, ಅನುಕುಮಾರ್, ಪ್ರದೋಷ್ ಸೇರಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.
ಬಳಿಕ ಇಂದು ಸಂಜೆ ಜಡ್ಜ್ ನಿವಾಸಕ್ಕೆ ಕರೆತರಲಾಯಿತು. ಬಳಿಕ ನ್ಯಾಯಾಧೀಶರು ದರ್ಶನ್ ಹಾಗೂ ಸಹಚರರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಆದೇಶ ನೀಡಿದರು. ಅದರಂತೆ ಎಲ್ಲಾ ಆರೋಪಿಗಳನ್ನೂ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 23 ಕ್ಕೆ ಮುಂದೂಡಲಾಗಿದೆ.
ಮುಂದೆ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ನೇರವಾಗಿ ಕೋರ್ಟ್ ಗೆ ಹಾಜರಾಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿಚಾರಣೆಗೆ ಅನುಕೂಲವಾಗುವಂತೆ ಎಲ್ಲಾ ಆರೋಪಿಗಳನ್ನೂ ಪರಪ್ಪನ ಅಗ್ರಹಾರಕ್ಕೇ ಶಿಫ್ಟ್ ಮಾಡಲಾಗಿದೆ.