ವರುಣಾ, ಚಾಮುಂಡೇಶ್ವರಿಯಲ್ಲಿ ದರ್ಶನ್, ಸುದೀಪ್ ಪ್ರಚಾರ?

ಮಂಗಳವಾರ, 12 ಡಿಸೆಂಬರ್ 2017 (09:20 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿನಿಮಾ ನಟರ ಮೂಲಕ ಪ್ರಚಾರ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರವಾಸ ಮಾಡಲಿರುವುದರಿಂದ, ಸ್ವಕೇತ್ರದಲ್ಲಿ ಸಿನಿಮಾ ತಾರೆಯರ ದಂಡು ಇಳಿಸಿ ಪ್ರಚಾರ ಮಾಡಿಸಲು ಪ್ಲಾನ್ ಮಾಡಿದ್ದು, ನಟ ಸುದೀಪ್, ದರ್ಶನ್, ನಟಿ ರಮ್ಯಾ, ಭಾವನಾ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಚಾರದ ಹೊಣೆ ಹೊರಲು ಮಾಜಿ ಸಂಸದೆ ರಮ್ಯಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ನಟಿ ಭಾವನಾ ಪ್ರಚಾರದಲ್ಲಿ ಸಕ್ರಿಯವಾಗಿ ಇರುತ್ತಾರೆ. ಇವರ ಜೊತೆಗೆ ದರ್ಶನ್ ತಾಯಿ, ಇವರು ಈಗಾಗಲೇ ಮಹಿಳಾ ಕಾಂಗ್ರೆಸ್ ಘಟಕದಲ್ಲಿದ್ದಾರೆ. ಆದ್ದರಿಂದ ದರ್ಶನ್ ಕೂಡ ಪ್ರಚಾರ ನಡೆಸಲಿದ್ದಾರೆ.

ಸೋಮವಾರ ಮುಖ್ಯಮಂತ್ರಿಯನ್ನು ಸುದೀಪ್ ಭೇಟಿ ಮಾಡಿದ್ದಾಗ ಸಿದ್ದರಾಮಯ್ಯ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದು, ಇದಕ್ಕೆ ಸುದೀಪ್ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ