ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Sampriya

ಗುರುವಾರ, 10 ಅಕ್ಟೋಬರ್ 2024 (16:42 IST)
ಬೆಂಗಳೂರು: ದಸರಾ ಮುಗಿಯುವುದರೊಳಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್, ಅವರ ಕುಟುಂಬ ಹಾಗೂ ಫ್ಯಾನ್ಸ್‌ಗೆ ಭಾರೀ ನಿರಾಸೆಯಾಗಿದೆ.

ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 57ನೇ ಸಿಸಿ ಎಚ್ ನ್ಯಾಯಾಲಯದ ನ್ಯಾಯಾಧೀಶ್ ಜೈಶಂಕರ್ ಅವರು ಸುದೀರ್ಘವಾದ ವಾದ ಪ್ರತಿವಾದವನ್ನು ಆಲಿಸಿದರು.  ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಇದೀಗ ದರ್ಶನ್ ಜಾಮೀನು ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ.

ಬೆಳಗ್ಗೆ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದರು. ಮಧ್ಯಾಹ್ನದ ನಂತರ ಸರ್ಕಾರಿ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್ ಅವರು ಪ್ರತಿವಾದ ಮಂಡಿಸಿದರು. ಸುದೀರ್ಘವಾಗಿ ನಡೆದ ನಡೆದ ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಇದೀಗ ತೀರ್ಪನ್ನು ಕಾಯ್ದಿರಿಸಿದ್ದಾರೆ.

ಈಗಾಗಲೇ ದರ್ಶನ್ ಅವರ ಜಾಮೀನು ಅರ್ಜಿ ವಿಚಾರ ಹಲವು ಬಾರಿ ಮುಂದೂಡಲಾಗಿತ್ತು. ನಿರಂತರವಾಗಿ ನಡೆದ ವಾದ ಪ್ರತಿವಾದದ ಬಳಿಕ ಇದೀಗ ದರ್ಶನ್ ಜಾಮೀನು ಅರ್ಜಿ ತೀರ್ಪು ರೋಚಕ ಘಟ್ಟಕ್ಕೆ ಬಂದು ನಿಂತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ