ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಎಸ್‌ಪಿಪಿ ಪ್ರಸನ್ನ ಕುಮಾರ್‌ ವಾದಕ್ಕೆ ನಾಳೆ ಸಿವಿ ನಾಗೇಶ್ ಕೌಂಟರ್‌

Sampriya

ಬುಧವಾರ, 9 ಅಕ್ಟೋಬರ್ 2024 (18:07 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಇಂದು ಕೂಡಾ ನಿರಾಸೆಯಾಗಿದೆ. ಸುದೀರ್ಘವಾಗಿ  ಇಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಸುದೀರ್ಘವಾಗಿ ಪ್ರತಿವಾದ ಮಂಡಿಸಿದ್ದಾರೆ.

ಎಸ್​ಪಿಪಿ ಪ್ರಸನ್ನ ಕುಮಾರ್ ವಾದಕ್ಕೆ ಪ್ರತಿವಾದ ಸಲ್ಲಿಸಲು ಸಿವಿ ನಾಗೇಶ್ ಅವರಿಗೆ ಅವಕಾಶ ನೀಡಲಾಯ್ತು. ಆದರೆ ತಾವು ನಾಳೆ (ಅಕ್ಟೋಬರ್ 10) ರಂದು ವಾದ ಮಂಡಿಸುವುದಾಗಿ ಹೇಳಿದರು.

ಅದರಿಂದ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಕೋರ್ಟ್‌ ಮುಂದೂಡಿದೆ. ಇನ್ನು ಎ1 ಪವಿತ್ರಾ, ಎ8, ಎ11, ಎ12 ಹಾಗೂ ಎ13 ಅವರುಗಳ ಜಾಮೀನು ಅರ್ಜಿಯ ಕುರಿತಾದ ಆದೇಶವನ್ನು ಅಕ್ಟೋಬರ್ 14 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು.

ದಿನದ ಅಂತ್ಯದ ವೇಳೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.  ಈಗಾಗಲೇ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಲವು ಬಾರಿ ಮುಂದೂಡಲಾಗಿದೆ. ಇನ್ನೂ ದಸರಾ ಮುಗಿಯುವ ವೇಳೆಗೆ ದರ್ಶನ್‌ಗೆ ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಇಂದು ನಿರಾಸೆಯಾಗಿದೆ. ಮತ್ತೇ ನಾಳೆ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ.

ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್‌, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕೋರ್ಟ್ ಕಾಯ್ದಿರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ