ಸಾಲು ಸಾಲು ಸಂಕಷ್ಟಗಳ ಬಳಿಕ ಅಹಲ್ಯದೇವಿ ದೇವಿಯ ಮೊರೆ ಹೋದ ದರ್ಶನ್‌

Sampriya

ಬುಧವಾರ, 15 ಜನವರಿ 2025 (16:07 IST)
Photo Courtesy X
ಮಂಡ್ಯ: ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಮಂಗಳವಾರ ಕುಟುಂಬದ ಸದಸ್ಯರೊಂದಿಗೆ ಸಂಕ್ರಾಂತಿ ಆಚರಿಸಿದ್ದ ನಟ ದರ್ಶನ್‌ ಅವರು ಇಂದು ಪಾಂಡವಪುರ  ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ.

ದರ್ಶನ್‌ ಅವರು ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ, ನಟ ಧನ್ವೀರ್ ಜೊತೆ ದರ್ಶನ್ ಅಹಲ್ಯದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂಕಷ್ಟ ಪರಿಹಾರಕ್ಕೆ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ.13 ರಂದು ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.

ಇತ್ತೀಚಿಗಷ್ಟೇ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಜ.12ರಿಂದ 17ರವರೆಗೆ ಮೈಸೂರಿಗೆ ತೆರಳಲು ಅನುಮತಿ ಕೋರಿದ್ದ ದರ್ಶನ್‌ಗೆ ಕೋರ್ಟ್ ಅನುಮತಿ ನೀಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ