ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

Sampriya

ಮಂಗಳವಾರ, 12 ಆಗಸ್ಟ್ 2025 (14:32 IST)
Photo Credit X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು  64ನೇ ಸೆಷನ್ಸ್ ಕೋರ್ಟ್​ನಲ್ಲಿ ವಿಚಾರಣೆ ನಡೆದಿದ್ದು, ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಹಾಜರಾದರು. 

ಕೊಲೆ ಪ್ರಕರಣದ  ಎ 10 ವಿನಯ್ , ಎ 15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್​​ಗೆ ಇಂದು ಹಾಜರಾಗಿಲ್ಲ ಹೀಗಾಗಿ, ವಿಚಾರಣೆಯಲ್ಲಿ ಸೆ.9ಕ್ಕೆ ಮುಂದೂಡಲಾಗಿದೆ. ಅಂದು ‌ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ.

ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ಪುಟ್ಟಸ್ವಾಮಿ, ರಾಘವೇಂದ್ರ, ನಂದೀಶ್, ರವಿಶಂಕರ್, ನಾಗರಾಜು, ಲಕ್ಷ್ಮಣ್, ದೀಪಕ್ ಕುಮಾರ್ ನ್ಯಾಯಾಲಯದ ಮುಂದೆ ಹಾಜರಿದ್ದರು. ವಿನಯ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಗೈರಾಗಿದ್ದರು.

ವಿಚಾರಣೆ ಬಳಿಕ ಪವಿತ್ರಾ ಗೌಡ ಕೋರ್ಟ್ ಆವರಣದಲ್ಲೇ ನಿಂತಿದ್ದರು. ದರ್ಶನ್ ಹೋಗುವುದನ್ನು ನೋಡಿಕೊಂಡು ನಿಂತಿದ್ದರು. ಆದರೆ, ಪವಿತ್ರಾ ಗೌಡ ಕಡೆ ತಿರುಗಿ ನೋಡದೇ ದರ್ಶನ್ ತೆರಳಿದರು. ವಿಚಾರಣೆಗೆ ಹಾಜರಾಗಿದ್ದ ದರ್ಶನ್‌ಗೆ ನಟ ಧನ್ವೀರ್ ಸಾಥ್ ಕೊಟ್ಟಿದ್ದರು.

ಮತ್ತೊಂದೆಡೆ ಸುಪ್ರೀಂ ಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಟ್ರಯಲ್ ಬಗ್ಗೆ ಪ್ರಶ್ನಿಸಿತ್ತು. ವಿಚಾರಣೆ ವೇಳೆ ಎಷ್ಟು ದಿನದಲ್ಲಿ ಟ್ರಯಲ್ ಆರಂಭ ಮಾಡ್ತೀರಾ ಎಂದು ಪ್ರಶ್ನೆ ಮಾಡಿತ್ತು. ಆಗ ಸರ್ಕಾರದ ಪರ ವಕೀಲರು ಆರು ತಿಂಗಳಲ್ಲಿ ವಿಚಾರಣೆ ಮುಗಿಸುತ್ತೇವೆ ಎಂದು ಉತ್ತರಿಸಿದ್ದರು‌. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ