ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿವೆ. ಇದರ ಬೆನ್ನಲ್ಲೇ ದಾಸ ದರ್ಶನ್ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.
ಕೊರೋನಾ ವೈರಸ್ ಇರುವುದರಿಂದ ಈ ಬಾರಿ ಹುಟ್ಟುಹಬ್ಬದ ಸಂಭ್ರಮಾಚರಣೆ ಬೇಡ ಎಂದು ನಿರ್ಧರಿಸಿದ್ದೇನೆ. ನಾನು ಊರಿನಲ್ಲಿ ಇರುವುದಿಲ್ಲ. ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆ ಶುಭ ಕೋರಲು ಬರುತ್ತಿದ್ದ ನಲ್ಮೆಯ ಅಭಿಮಾನಿಗಳಿಗೆ ಈ ಸೂಚನೆ; ಯಾರೂ ಮನೆಯ ಹತ್ತಿರ ಬಂದು ನಿರಾಶರಾಗಬೇಡಿ. ನನ್ನ ಈ ಕೋರಿಕೆಯನ್ನು ಮನ್ನಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹೇಳಿದ್ದಾರೆ. ಪ್ರತೀ ವರ್ಷವೂ ದರ್ಶನ್ ತಮ್ಮ ಹುಟ್ಟುಹಬ್ಬದಂದು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.