Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ
ನಟ ದರ್ಶನ್ ಮತ್ತು ಎಲ್ಲಾ ಆರೋಪಿಗಳೂ ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಆದರೆ ಷರತ್ತು ಬದ್ಧ ಜಾಮೀನಾಗಿರುವ ಕಾರಣ ತಿಂಗಳಿಗೊಮ್ಮೆ ಎಲ್ಲಾ ಆರೋಪಿಗಳೂ ಕೋರ್ಟ್ ಗೆ ಹಾಜರಾಗಲೇಬೇಕಿದೆ.
ಇದರ ನಡುವೆ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಪ್ರಶ್ನಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದರ ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ತೀರ್ಮಾನವಾಗಲಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.
ದರ್ಶನ್ ಹಾಗೂ ಸಹಚರರ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ಆರೋಪಿಗಳು ಪ್ರಭಾವಿಗಳಾಗಿರುವುದರಿಂದ ಇಂತಹ ಆರೋಪಿಗಳಿಗೆ ಜಾಮೀನು ನೀಡಿದರೆ ಕೇಸ್ ಹಳ್ಳ ಹಿಡಿಯುತ್ತದೆ ಎನ್ನುವುದು ಪೊಲೀಸರ ವಾದವಾಗಿದೆ.