Darshan Thoogudeepa video: ಪತ್ನಿಯನ್ನು ತಬ್ಬಿಕೊಂಡು ಮುದ್ದು ರಾಕ್ಷಸಿ ಎಂದು ದರ್ಶನ್ ಡ್ಯಾನ್ಸ್ ಮಾಡಿದ್ದೇ ಮಾಡಿದ್ದು
ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಇಂದು 22 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ದಂಪತಿ ಈಗ ಬಾಲಿ ಪ್ರವಾಸದಲ್ಲಿದ್ದಾರೆ. ಇಲ್ಲಿ ತಮ್ಮ ಗೆಳೆಯರ ಜೊತೆಗೆ ವಿವಾಹ ವಾರ್ಷಿಕೋತ್ಸವ ನಿಮಿತ್ತ ಪಾರ್ಟಿ ಮಾಡಿದ್ದಾರೆ.
ಪಾರ್ಟಿಯಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮಿ ಮುದ್ದು ರಾಕ್ಷಸಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ತುಂಬಾ ರೊಮ್ಯಾಂಟಿಕ್ ಆಗಿ ಇಬ್ಬರೂ ಪರಸ್ಪರ ತಬ್ಬಿಕೊಂಡು ಡ್ಯಾನ್ಸ್ ಮಾಡಿರುವ ವಿಡಿಯೋವನ್ನು ಅಭಿಮಾನಿಗಳೂ ಮೆಚ್ಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಳಿಕ ದರ್ಶನ್ ಪತ್ನಿ ಹಾಗೂ ತಮ್ಮದೇ ಕೆಲವೇ ಕೆಲವು ಆಪ್ತರ ಜೊತೆಗೆ ಮಾತ್ರ ಬೆರೆಯುತ್ತಿದ್ದಾರೆ. ಇಂದು ವಿವಾಹ ವಾರ್ಷಿಕೋತ್ಸವದ ನಿಮಿತ್ತ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಪತಿ ಜೊತೆಗಿರುವ ಫೋಟೋ ಪ್ರಕಟಿಸಿ ವಿಶ್ ಮಾಡಿದ್ದರು.