Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Krishnaveni K

ಸೋಮವಾರ, 19 ಮೇ 2025 (12:27 IST)
Photo Credit: Instagram
ಬೆಂಗಳೂರು: ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಇಂದು 22 ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದು ಪತಿ ಜೊತೆಗಿರುವ ಫೋಟೋ ಪ್ರಕಟಿಸಿ ವಿಜಯಲಕ್ಷ್ಮಿ ಟೀಕೆ ಮಾಡುವವರಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ದರ್ಶನ್ ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿದ್ದಾರೆ. ಎಲ್ಲೇ ಹೋದರೂ ಪತ್ನಿ ಜೊತೆಗೇ ತಿರುಗಾಡುತ್ತಿದ್ದಾರೆ. ತಮ್ಮ ಸಹವಾಸವನ್ನೂ ಬದಲಿಸಿಕೊಂಡಿದ್ದಾರೆ.

ಪವಿತ್ರಾ ಗೌಡ ಜೊತೆಗಿನ ಸ್ನೇಹ ಸಂಬಂಧವನ್ನೂ ಕಟ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಇಂದು ದಂಪತಿ 22 ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು ಪತಿ ಜೊತೆಗಿರುವ ಮುದ್ದಾದ ಫೋಟೋವೊಂದನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ.

ಜೊತೆಗೆ ‘ಎಂದೆಂದಿಗೂ ಶಾಶ್ವತವಾಗಿ’ ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮಿಬ್ಬರ ಸಂಬಂಧವನ್ನು ಅನುಮಾನಪಡುವವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ. ಇನ್ನು ಈ ಫೋಟೋಗೆ ಸಾಕಷ್ಟು ಜನ ಲೈಕ್ಸ್, ಕಾಮೆಂಟ್ ಮಾಡಿದ್ದು ವಿವಾಹ ವಾರ್ಷಿಕೋತ್ಸವಕ್ಕೆ ಶುಭಾಶಯ, ನಿಮ್ಮ ಜೋಡಿಗೆ ಯಾರ ಕಣ್ಣೂ ಬೀಳದಿರಲಿ ಎಂದು ಹಾರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ