ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

Krishnaveni K

ಸೋಮವಾರ, 18 ಆಗಸ್ಟ್ 2025 (12:12 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆದಿದೆ. ಇನ್ನೊಂದೆಡೆ ಅವರನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊಳ್ಳಲು ವಕೀಲರು ಹರಸಾಹಸ ಪಡುತ್ತಿದ್ದಾರೆ.
 

ನಟ ದರ್ಶನ್ ಈ ಮೊದಲು ಬೆಂಗಳೂರಿನಲ್ಲಿ ವಿಐಪಿ ಆತಿಥ್ಯ ಪಡೆದಿದ್ದಕ್ಕೆ ಬಳ್ಳಾರಿಗೆ ಶಿಫ್ಟ್ ಆಗಿದ್ದರು. ಅದಾದ ಬಳಿಕ ಅವರು ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಇದೀಗ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿರುವ ಹಿನ್ನಲೆಯಲ್ಲಿ ದರ್ಶನ್ ಆಂಡ್ ಗ್ಯಾಂಗ್ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದಾರೆ.

ಆದರೆ ದರ್ಶನ್ ರನ್ನು ಮತ್ತೆ ಬಳ್ಳಾರಿ ಜೈಲಿಗೇ ಕಳುಹಿಸಲು ಪ್ರಾಸಿಕ್ಯೂಷನ್ ಪರ ಅಭಿಯೋಜಕರು ಸೆಷನ್ಸ್ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಒಂದು  ವೇಳೆ ಅವರ ಮನವಿ ನ್ಯಾಯಾಲಯ ಪುರಸ್ಕರಿಸಿದರೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ.

ಆದರೆ ಬಳ್ಳಾರಿ ಜೈಲಿಗೆ ಶಿಫ್ಟ್ ಆದರೆ ಅವರನ್ನು ಆಗಾಗ ಭೇಟಿ ಮಾಡಲು ಕುಟುಂಬಸ್ಥರಿಗೆ ಕಷ್ಟವಾಗಲಿದೆ. ಹೀಗಾಗಿ ದರ್ಶನ್ ಪರ ವಕೀಲರು ಅವರನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಇದರಿಂದ ತನಿಖೆಗೂ ಅನುಕೂಲವಾಗುತ್ತದೆ ಎಂದು ವಕೀಲರು ವಾದ ಮಂಡಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ