ಹೊಸ ವರ್ಷ ಹೊಸ ಭರವಸೆ ತುಂಬಲಿ: ಡಿ ಬಾಸ್ ದರ್ಶನ್ ವಿಶ್

ಶುಕ್ರವಾರ, 1 ಜನವರಿ 2021 (09:27 IST)
ಬೆಂಗಳೂರು: ಹೊಸ ವರ್ಷಕ್ಕೆ ಹೊಸ ಭರವಸೆ ತುಂಬಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ.


ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ಮೂಲಕ ಡಿ ಬಾಸ್ ಶುಭಾಶಯ ಕೋರಿದ್ದಾರೆ. ‘ಹೊಸ ವರ್ಷ ಎಂದ ಮೇಲೆ ಏನೋ ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಕೊರೋನಾ ಈ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ. ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಶುಭಾಶಯಗಳು’ ಎಂದು ಶುಭ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ