ಪ್ರಭಾಸ್ ಜತೆ ದೀಪಿಕಾ ಪಡುಕೋಣೆ ಅಭಿನಯಿಸುವುದು ಪಕ್ಕಾ
ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಫೆಬ್ರವರಿಯಲ್ಲೇ ಈ ಸಿನಿಮಾ ಬಗ್ಗೆ ಚಿತ್ರತಂಡ ಘೋಷಣೆ ಮಾಡಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಮುಂದಿನ ಹಂತದ ಬೆಳವಣಿಗೆಗಳು ನಡೆದಿರಲಿಲ್ಲ. ಈ ಸಿನಿಮಾ ಮೂಲಕ ದೀಪಿಕಾ ಇದೇ ಮೊದಲ ಬಾರಿಗೆ ತೆಲುಗು ಸಿನಿಮಾ ರಂಗಕ್ಕೆ ಕಾಲಿಡಲಿದ್ದಾರೆ.