ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

Sampriya

ಭಾನುವಾರ, 20 ಜುಲೈ 2025 (16:09 IST)
ಬೆಂಗಳೂರು: ಧರ್ಮಸ್ಥಳದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಕೃತ್ಯದ ಆರೋಪದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಹಾಗೂ ನಟ ರಾಕೇಶ್‌ ಅಡಿಗ ಅವರು ಪ್ರತಿಕ್ರಿಯಿಸಿ, ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಬರೆದಿರುನ ನಟಿ ರಮ್ಯಾ ಅವರು, ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ಕೇಳಿ ನನಗೆ ತುಂಬಾ ಆಘಾತವಾಗಿದೆ. ಇದು ಆರಾಧನೆಯ ಸ್ಥಳವಾಗಿದೆ ಮತ್ತು ಕರ್ನಾಟಕದ ಜನರು ಹೆಚ್ಚು ಗೌರವಿಸುತ್ತಾರೆ. ನ್ಯಾಯಯುತ ತನಿಖೆಯಾಗಲಿ ಎಂದು ಆಶಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

ನಟ ರಾಕೇಶ್ ಅಡಿಗ ಪೋಸ್ಟ್‌ ಹಾಕಿ, ನಮ್ಮ ಸರ್ಕಾರಕ್ಕೆ, ನಾನು ಬೇಡಿಕೊಳ್ಳುತ್ತೇನೆ, ನಿಮ್ಮ ಜನರ ನಿಟ್ಟುಸಿರಿಗೆ ಎದುರಾಗಿ, ಅವರ ಅಳಲನ್ನು ಆಲಿಸಿ. ತನಿಖೆ ನಡೆಸುವುದು, ಸತ್ಯವನ್ನು ಹೊರಹಾಕುವುದು ಮತ್ತು ನ್ಯಾಯವನ್ನು ಖಚಿತಪಡಿಸುವುದು ನಿಮ್ಮ ಪವಿತ್ರ ಕರ್ತವ್ಯ. ಇನ್ನು ವಿಳಂಬ, ನೆಪಗಳು ಬೇಡ ಎಂದು ಬರೆದುಕೊಂಡಿದ್ದಾರೆ. 



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ