ಸಾವಿರಕ್ಕೂ ಅಧಿಕ ಥಿಯೇಟರ್ ನಲ್ಲಿ ಪೊಗರು ದರ್ಶನ

ಸೋಮವಾರ, 25 ಜನವರಿ 2021 (07:42 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಲಾಕ್ ಡೌನ್ ಬಳಿಕ ಬಿಡುಗಡೆಯಾಗುತ್ತಿರುವ ಭಾರೀ ನಿರೀಕ್ಷಿತ ಸಿನಿಮಾ ಇದಾಗಿದೆ.


ಫೆಬ್ರವರಿ 19 ರಂದು ಚಿತ್ರ ಬಿಡುಗಡೆಯಾಗಲಿದ್ದು, ಸಾವಿರಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗು, ತಮಿಳಿನಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆ. ಅಣ್ಣ ಚಿರು ಸರ್ಜಾ ಸಾವಿನ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾ ಎಂಬುದು ಒಂದು ಕಡೆಯಾದರೆ ಮೂರೂವರೆ ವರ್ಷಗಳ ಬಳಿಕ ತೆರೆ ಮೇಲೆ ಬರುತ್ತಿರುವ ಕಾತುರತೆಯಲ್ಲಿ ಧ್ರುವ ಸರ್ಜಾ ಈ ಸಿನಿಮಾವನ್ನು ಎದಿರು ನೋಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ