ಧ್ರುವ-ಪ್ರೇಮ್ ಕಾಂಬಿನೇಷನ್ ಸಿನಿಮಾದ ಟೈಟಲ್ ಶೀಘ್ರದಲ್ಲಿ

ಸೋಮವಾರ, 25 ಏಪ್ರಿಲ್ 2022 (10:10 IST)
ಮೈಸೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಕಾಂಬಿನೇಷನ್‍ ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ಮೈಸೂರಿನಲ್ಲಿ ನಾಡದೇವತೆ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ನೆರವೇರಿದೆ.

ಸದ್ಯಕ್ಕೆ ಚಿತ್ರಕ್ಕೆ ಟೈಟಲ್ ಇಡಲಾಗಿಲ್ಲ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಘೋಷಣೆಯಾಗಲಿದೆ. ಮುಹೂರ್ತ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ, ಪ್ರೇಮ್ ಸೇರಿದಂತೆ ಚಿತ್ರತಂಡದವರು ಉಪಸ್ಥಿತರಿದ್ದರು.

ನಿನ್ನೆ ವರನಟ ಡಾ.ರಾಜ್ ಕುಮಾರ್ ಹುಟ್ಟುಹಬ್ಬವಾಗಿದ್ದರಿಂದ ಅವರ ಹೆಸರಿನಲ್ಲಿ ಕೇಕ್ ಕಟ್ ಮಾಡಿ ಚಿತ್ರತಂಡ ಅಣ್ಣಾವ್ರನ್ನು ನೆನೆದು ಚಿತ್ರಕ್ಕೆ ಚಾಲನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ