ಬೆಂಗಳೂರು: ಹುಬ್ಬಳ್ಳಿಯಲ್ಲಿ ಪಾಪಿ ಫಯಾಜ್ ನಿಂದ ಹತ್ಯೆಯಾದ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ ನೇಹಾ ಹೀರೇಮಠ್ ಪ್ರಕರಣದ ಬಗ್ಗೆ ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ.
ನೇಹಾ ಹತ್ಯೆಯನ್ನು ಖಂಡಿಸಿರುವ ಧ್ರುವ ಸರ್ಜಾ ಕೃತ್ಯ ನಡೆಸಿದ ಅಪರಾಧಿಗೆ ಅತ್ಯುಗ್ರ ಶಿಕ್ಷೆ ಸಿಗುವಂತಾಗಬೇಕು ಎಂದಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಧ್ರುವ ಸರ್ಜಾ ಪ್ರತಿಕ್ರಿಯಿಸಿದ್ದಾರೆ. ಘಟನೆ ಬಗ್ಗೆ ಸ್ಯಾಂಡಲ್ ವುಡ್ ನಟರು ಯಾರೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಧ್ರುವ ಸರ್ಜಾ ಧ್ವನಿಯೆತ್ತಿರುವುದಕ್ಕೆ ನೆಟ್ಟಿಗರು ಪ್ರಶಂಸಿಸಿದ್ದಾರೆ.
ಸಹೋದರಿ ನೇಹಾ ಹೀರೇಮಠ್ ರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.
ಇದಕ್ಕೆ ಕಾಮೆಂಟ್ ಮಾಡಿರುವ ನೆಟ್ಟಿಗರೊಬ್ಬರು ಸಮಾಜದಲ್ಲಿ ಇಂತಹದ್ದೊಂದು ಘಟನೆ ನಡೆದಾಗ ಕನ್ನಡ ಚಿತ್ರರಂಗದ ಯಾರೂ ತಮಗೆ ಸಂಬಂಧವೇ ಇಲ್ಲದಂತೆ ಇದ್ದಾರೆ. ಆದರೆ ಧ್ರುವ ಹಾಗಲ್ಲ, ಸೂಕ್ಷ್ಮ ಸಂವೇದಿ ಸಮಾಜಮುಖಿ ಎಂದು ಹೊಗಳಿದ್ದಾರೆ. ಇನ್ನು ಕೆಲವರು ಕೃತ್ಯ ನಡೆಸಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.