ಕೊಚ್ಚಿ: ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿರುವ ಮಲಯಾಳಂ ಸೂಪರ್ ಸ್ಟಾರ್ ದಿಲೀಪ್ ಇನ್ನೂ ಎರಡು ದಿನ ಪೊಲೀಸ್ ಕಸ್ಟಡಿಯಲ್ಲಿರಬೇಕಾಗಿದೆ.
ಅಂಗಮಾಲಿಯಲ್ಲಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಇಂದು ಬೆಳಗ್ಗೆ ಹಾಜರಾಗಿರುವ ದಿಲೀಪ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಇನ್ನೂ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ನಟನಿಂದ ಇನ್ನೂ ಹಲವು ವಿಚಾರಗಳ ಬಗ್ಗೆ ವಿಚಾರಣೆ ನಡೆಯಬೇಕಿರುವುದರಿಂದ ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಎರಡು ದಿನದ ನಂತರ ಜಾಮೀನು ಅರ್ಜಿ ಮತ್ತೆ ವಿಚಾರಣೆಗೆ ಬರಲಿದೆ.
ನಿನ್ನೆಯಿಂದ ಜೈಲಿನಲ್ಲಿರುವ ನಟ ದಿಲೀಪ್ ಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿಲ್ಲ. ಹಾಗಿದ್ದರೂ ಇತರ ಖೈದಿಗಳಿಂದ ತೊಂದರೆಯಾಗಬಹುದು ಎಂಬ ಕಾರಣಕ್ಕೆ ಪ್ರತ್ಯೇಕ ಸೆಲ್ ನಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ದಿಲೀಪ್ ರನ್ನು ಆಲುವಾ ಪೊಲೀಸ್ ಕ್ಲಬ್ ಗೆ ಹೆಚ್ಚಿನ ವಿಚಾರಣೆಗೆ ಕರೆದೊಯ್ಯಲಾಗಿದೆ.