ಈ ಚಿತ್ರದಲ್ಲಿ ಖಳನಾಯಕನಾಗಿ ನಟಿಸಲಿದ್ದಾರಂತೆ ನಿರ್ದೇಶಕ ಗೌತಮ್ ಮೆನನ್

ಶನಿವಾರ, 30 ಜನವರಿ 2021 (10:22 IST)
ಚೆನ್ನೈ : ಕಾಲಿವುಡ್ ಹಾಗೂ ಟಾಲಿವುಡ್ ನ ಸ್ಟಾರ್ ನಿರ್ದೇಶಕರಾದ ಗೌತಮ್ ಮೆನನ್ ಅವರು ಈಗಾಗಲೇ ಕೆಲವು ಚಿತ್ರಗಳಲ್ಲಿ ನಟನಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಅವರು ಖಳನಾಯಕನಾಗಿ ನಟಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕೃಷ್ಣ ಎನ್ ನಿರ್ದೇಶನದ ಮುಂಬರುವ ‘ಪಾತು ತಲಾ’ ಚಿತ್ರದಲ್ಲಿ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಸಿಂಬು ಮತ್ತು ಗೌತಮ್ ಮೆನನ್ ಮೊದಲಿನಿಂದಲೂ ನಿಕಟ ಸಂಬಂಧವನ್ನು ಹೊಂದಿದ್ದರಿಂದ ಅವರ ಚಿತ್ರದಲ್ಲಿ ಖಳನಾಯಕನಾಗಿ ನಟಿಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ