ಚೆಕ್ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್, ರಿಲೀಸ್

ಶನಿವಾರ, 14 ಜನವರಿ 2023 (08:50 IST)
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್ ಆಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಶ್ರೀನಿವಾಸ್ ಎಂಬವರಿಂದ ಹಣ ಪಡೆದು ಬಳಿಕ ಹಿಂತಿರುಗಿಸದೇ ವಂಚಿಸಿದ್ದರು. ಬಳಿಕ ಅವರು ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಶ್ರೀನಿವಾಸ್ ಪೊಲೀಸರಿಗೆ ದೂರು ನೀಡಿದ್ದರು.

ಗುರುಪ್ರಸಾದ್ ಸುಮಾರು 30 ಲಕ್ಷ ರೂ. ಸಾಲ ಪಡೆದಿದ್ದರು. ದುಡ್ಡ ಕೇಳಿದಾಗ ಕೊಡದೇ ಸತಾಯಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಅವರನ್ನು ಬಂಧಿಸಿ ರಾತ್ರಿಯೇ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ