ಕೊರೊನಾ ಸೋಂಕಿಗೆ ಒಳಗಾದ ನಿರ್ದೇಶಕ ಲೋಕೇಶ್ ಕನಗರಾಜ

ಮಂಗಳವಾರ, 30 ಮಾರ್ಚ್ 2021 (16:51 IST)
ಚೆನ್ನೈ : ಇತ್ತೀಚೆಗೆ ಕೊರೊನಾ ಸಾಂಕ್ರಾಮಿಕ ರೋಗದ ಹಾವಳಿ ಹೆಚ್ಚಾಗಿದ್ದು, ಹಲವು ಸಿನಿಮಾ ತಾರೆಯರು ಕೊರೊನಾ  ಸೋಂಕಿಗೆ ಒಳಗಾಗಿದ್ದಾರೆ. ಇದೀಗ ವಿಜಯ್ ಮಾಸ್ಟರ್ ಚಿತ್ರದ ನಿರ್ದೇಶಕ ಲೋಕೇಶ್ ಕನಗರಾಜ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರಂತೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ತಿಳಿಸಿದ ನಿರ್ದೇಶಕ ಲೋಕೇಶ್ ಅವರು, ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಕೊರೊನಾ ಟೆಸ್ಟ್ ಮಾಡಿಸಿದಾಗ ಪೊಸಿಟಿವ್ ಬಂದಿದೆ. ಹಾಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಶೀಘ್ರದಲ್ಲಿಯೇ ನಾನು ಗುಣಮುಖನಾಗುತ್ತೇನೆ ಎಂದು ತಿಳಿಸಿದ್ದಾರೆ.

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ಕಮಲ್ ಹಾಸನ್  ಮತ್ತು ರಾಘವ ಲಾರೆನ್ಸ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಚಿತ್ರ ವಿಕ್ರಮ್ ನ್ನು ನಿರ್ದೇಶನ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ