ನಟ ಕಮಲ್ ಹಾಸನ್ ಹೊಂದಿದ್ದ ಆಸ್ತಿ ಎಷ್ಟು ಗೊತ್ತಾ?

ಬುಧವಾರ, 17 ಮಾರ್ಚ್ 2021 (08:46 IST)
ಚೆನ್ನೈ : ತಮಿಳುನಾಡಿನ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮಕ್ಕಲ್ ನೀಧಿ ಮಾಯಂ ಅಧ್ಯಕ್ಷ ಕಮಲ್ ಹಾಸನ್ ಅವರು ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿದ್ದಾರೆ. ಆ ವೇಳೆ ಅವರು ತಾವು ಹೊಂದಿರುವ ಆಸ್ತಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಮಲ್ ಹಾಸನ್ ಅವರು ಒಟ್ಟು 176.9 ಕೋಟಿ ಆಸ್ತಿಯನ್ನು ಹೊಂದಿದ್ದಾರೆ. ಅದರಲ್ಲಿ 131.8 ಕೋಟಿ ಸ್ಥಿರ ಮತ್ತು 45.9 ಕೋಟಿ ಅಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. ಅವರು 49. 05 ಕೋಟಿ ರೂ. ಸಾಲವನ್ನು ಹೊಂದಿದ್ದಾರೆ. ಇವರು ಯಾವುದೇ ನ್ಯಾಯಾಲಯ ಪ್ರಕರಣಗಳಿಂದ ಮುಕ್ತರಾಗಿದ್ದಾರೆ ಎನ್ನಲಾಗಿದೆ. ಹಾಗೇ ಇವರು ತಮಿಳು ನಾಡಿನಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ