ವೈಷ್ಣವ್ ತೇಜ್ 2ನೇ ಚಿತ್ರದ ಶೀರ್ಷಿಕೆ ಏನು ಗೊತ್ತಾ?

ಸೋಮವಾರ, 1 ಮಾರ್ಚ್ 2021 (09:34 IST)
ಹೈದರಾಬಾದ್ : ಇತ್ತೀಚೆಗೆ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ ಉಪ್ಪೇನಾ ಚಿತ್ರದ ಮೂಲಕ ನಟ ವೈಷ್ಣವ್ ತೇಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇದೀಗ ಅವರು ನಿರ್ದೇಶಕ ಕೃಷ್ ಅವರೊಂದಿಗೆ ಎರಡನೇಯ ಚಿತ್ರ ಮಾಡುತ್ತಿದ್ದಾರೆ.

ಈ ಚಿತ್ರದ ಚಿತ್ರೀಕರಣ ಈಗಾಗಲೇ ಶುರುವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಈ ಚಿತ್ರ ಆಗಸ್ಟ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಾಕುಲ್ ಪ್ರೀತ್ ಸಿಂಗ್ ನಾಯಕಿಯಾಗಿ ನಟಿಸುತ್ತಿದ್ದು, ಇದೀಗ ಈ ಚಿತ್ರಕ್ಕೆ ‘ಜಂಗಲ್ ಬುಕ್’ ಎಂದು ಶೀರ್ಷಿಕೆ ಇಡಲಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ