ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಪರ ವಾದ ಮಂಡಿಸುವ ಖ್ಯಾತ ವಕೀಲರು ಯಾರು ಗೊತ್ತಾ

Sampriya

ಸೋಮವಾರ, 17 ಫೆಬ್ರವರಿ 2025 (14:04 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ಹಲವು ತಿಂಗಳ ಜೈಲುವಾಸ ಅನುಭವಿಸಿ, ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದಾರೆ.

ನಟ ದರ್ಶನ್‌ ಸೇರಿದಂತೆ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ  ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಬರಲಿದೆ.

 ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ ವಾದ ಮಂಡಿಸಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಪರ ಯಾರು ವಾದ ಮಂಡಿಸಲಿದ್ದಾರೆ ಎಂಬ ಕುತೂಹಲ ಜನರಲ್ಲಿದೆ. ಮೂಲಗಳ ಪ್ರಕರಣ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕಪಿಲ್‌ ಸಿಬಲ್‌ ಅವರು ದರ್ಶನ್‌ ಪರ ವಾದ ಮಂಡಿಸಲಿದ್ದಾರೆ.

ದೇಶದ ಖ್ಯಾತ ವಕೀಲರು ಆಗಿರುವ ಕಪಿಲ್‌ ಸಿಬಲ್‌ ಅವರನ್ನು ದರ್ಶನ್‌ ಅವರ ಕಾನೂನು ತಂಡ ಈಗಾಗಲೇ ಸಂಪರ್ಕಿಸಿದೆ. ಅವರನ್ನು ಭೇಟಿಯಾಗಿ ಹೈಕೋರ್ಟ್‌ನ ವಾದ ಪ್ರತಿವಾದ, ಪ್ರಕರಣದ ಕುರಿತು ಮಾಹಿತಿ ನೀಡಲಾಗಿದೆ. ಕೋರ್ಟ್‌ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ. ದರ್ಶನ್‌ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾರ್ಚ್‌ ‌18 ರಂದು  ಸಿಬಲ್‌ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.  

ಕರ್ನಾಟಕ ಹೈಕೋರ್ಟ್‌ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಡಿಸೆಂಬರ್ 13 ರಂದು ಪೂರ್ಣಾವಧಿಗೆ ಜಾಮೀನು ಮಂಜೂರಾಗಿತ್ತು. ಇದನ್ನು ಪ್ರಶ್ನಿಸಿ ಪೊಲೀಸರು ವಕೀಲ ಅನಿಲ್ ನಿಶಾನಿ ಮೂಲಕ  ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ