ಜಾನಿ ಮಾಸ್ಟರ್‌ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು ಮಾಡಿದ್ದು ಯಾಕೆ ಗೊತ್ತಾ

Sampriya

ಭಾನುವಾರ, 6 ಅಕ್ಟೋಬರ್ 2024 (14:21 IST)
ನವದೆಹಲಿ: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಿಂಪಡೆಯಲಾಗದೆ.

ಜಾನಿ ಮಾಸ್ಟರ್ ವಿರುದ್ಧ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ  ಪ್ರಕರಣ ದಾಖಲಾಗಿದೆ. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.

ಜಾನಿ ಮಾಸ್ಟರ್ ನಿಜವಾದ ಹೆಸರು ಶೇಕ್ ಜಾನಿ ಬಾಷಾ ಎಂಬುದಾಗಿದೆ. ತಿರುಚಿತ್ರಂಬಲಂ ನ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದರು. ನೃತ್ಯ ನಿರ್ದೇಶಕ ಸತೀಶ್ ಕೃಷ್ಣನ್ ಅವರೊಂದಿಗೆ ಜಾನಿ ಮಾಸ್ಟರ್ ಪ್ರಶಸ್ತಿ ಹಂಚಿಕೊಂಡಿದ್ದರು.

ಇದೀಗ, ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಕೋಶವು ಪ್ರಶಸ್ತಿಯನ್ನು ಅಮಾನತುಗೊಳಿಸಿದೆ ಎಂದು ಪ್ರಕಟಣೆ ನೀಡಿದೆ.

ನವದೆಹಲಿಯಲ್ಲಿ ಅಕ್ಟೋಬರ್ 8ರಂದು ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್ ಅವರಿಗೆ ನೀಡಿದ್ದ ಆಹ್ವಾನವನ್ನೂ ಹಿಂತೆಗೆದುಕೊಳ್ಳಲಾಗಿದೆ ಎಂದು ಹಿಂದೂಸ್ತಾನ ಟೈಮ್ಸ್‌ ವರದಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ