ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ ಡಾಲಿ ಧನಂಜಯ್

Sampriya

ಗುರುವಾರ, 26 ಡಿಸೆಂಬರ್ 2024 (17:31 IST)
Photo Courtesy X
ಬೆಂಗಳೂರು: ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಟ ಡಾಲಿ ಧನಂಜಯ್ ಅವರು ಇದೀಗ ಗಣ್ಯರನ್ನು ಮದುವೆಗೆ ಆಹ್ವಾನಿಸುವುದರಲ್ಲಿ ಬ್ಯುಸಿಯಾಗಿದ್ದಾರೆ.  ಇದೀಗ ಭಾವಿ ಪತ್ನಿ ಧನ್ಯತಾ ಜತೆ ಡಾಲಿ ಧನಂಜಯ್ ಅವರು ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದರು.

ಇನ್ನೂ ಈಚೆಗೆ ಡಾಲಿ ಧನಂಜಯ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಂಸದ ಡಿಕೆ ಸುರೇಶ್‌, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.

ಮದುವೆ ಹಿನ್ನೆಲೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳಿಗೆ ಧನಂಜಯ್ ಹಾಗೂ ಧನ್ಯತಾ ಆಮಂತ್ರಣ ಪತ್ರಿಕೆ ನೀಡ್ತಿದ್ದಾರೆ.

ತರಳಬಾಳು ಸ್ವಾಮೀಜಿ ಶಿವಮೂರ್ತಿ ಶಿವಾಚಾರ್ಯ ಅವರಿಗೂ ವಿವಾಹ ಪತ್ರಿಕೆ ನೀಡಿದ ಡಾಲಿ ಧನಂಜಯ್ ಹಾಗೂ ಧನ್ಯತಾ ಅವರು ಸ್ವಾಮೀಜಿಯ ಆಶೀರ್ವಾದ ಕೂಡ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ