ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

Sampriya

ಭಾನುವಾರ, 24 ಆಗಸ್ಟ್ 2025 (12:12 IST)
Photo Credit X
ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ್‌ ಅಭಿಮಾನಿಗಳಿಗೆ ಒಂದೇ ದಿನ ಡಬಲ್‌ ಗುಡ್‌ನ್ಯೂಸ್‌ ದೊರಕಿದೆ. ತಮ್ಮ ಹೀರೋ ಜೈಲಿನಲ್ಲಿದ್ದರೂ ಈ ಅಪ್‌ಡೇಟ್‌ನಿಂದ ಅಭಿಮಾನಿಗಳು ಫುಲ್‌ ಖುಷಿಯಾಗಿದ್ದಾರೆ. 

ದರ್ಶನ್ ನಟನೆಯ ಡೆವಿಲ್  ಸಿನಿಮಾದ ಇದ್ರೆ ನೆಮ್ದಿಯಾಗ್ ಇರ್ಬೇಕ್ ಸಾಂಗ್ ಇಂದು ರಿಲೀಸ್ ಆಗಿದೆ. ಈ ಹಾಡು ಕೆಲವೇ ನಿಮಿಷಗಳಲ್ಲಿ ಚಿತ್ರದ ರಿಲೀಸ್ ಡೇಟ್ ಕೂಡಾ ಅನೌನ್ಸ್ ಆಗಿದೆ. ಹೌದು, ಡೆವಿಲ್ ಸಿನಿಮಾ ಇದೇ ವರ್ಷ ಡಿಸೆಂಬರ್ 12ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. 

ಈ ಸುದ್ದಿಯನ್ನ ದರ್ಶನ್ ಅವರ ಸಾಮಾಜಿಕ ಜಾಲತಾಣದಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ದರ್ಶನ್ ಅವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಮಾಡ್ತಿರುವ ದರ್ಶನ್ ಪತ್ನಿ ಈ ಮೂಲಕ ದರ್ಶನ್ ಅಭಿಮಾನಿಗಳಿಗೆ ಧನ್ಯವಾದಗಳನ್ನ ಹೇಳಿದ್ದಾರೆ. 

ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ ದಿ ಡೆವಿಲ್ ಡಿಸೆಂಬರ್ 12ರಂದು ಬಿಡುಗಡೆಯಾಗಲಿದೆ ಎಂದು ತಮ್ಮ ಸೆಲೆಬ್ರಿಟಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಾಂಗ್ ನೋಡಿ ಸಂಭ್ರಮ ಪಡುತ್ತಿದ್ದ ಫ್ಯಾನ್ಸ್ ಸಿನಿಮಾ ರಿಲೀಸ್ ಡೇಟ್ ನೋಡಿ ಮತ್ತಷ್ಟು ಖುಷಿಯಿಂದ ಸಂಭ್ರಮಿಸಿದ್ದಾರೆ.

ಬಹುನಿರೀಕ್ಷಿತ ಇದ್ರೆ ನೆಮ್ದಿಯಾಗ್ ಇರ್ಬೇಕ್ ಮೊದಲ ಸಾಂಗ್ ರಿಲೀಸ್ ಆಗಿ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ತಿದೆ. ಇದೀಗ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿರೋದು ದರ್ಶನ್ ಅಭಿಮಾನಿಗಳಿಗೆ ಡಬಲ್‌ ಖುಷಿ ನೀಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ