ಕೊರೋನಾಗೆ ಬಲಿಯಾದ ಸಾಹಿತಿ ಸಿದ್ದಲಿಂಗಯ್ಯ, ನಟ ಸುರೇಶ್ ಚಂದ್ರ

ಶನಿವಾರ, 12 ಜೂನ್ 2021 (09:02 IST)
ಬೆಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸಾಹಿತಿ ಡಾ. ಸಿದ್ದಲಿಂಗಯ್ಯ ಹಾಗೂ ನಟ ಸುರೇಶ್ ಚಂದ್ರ ನಿನ್ನೆ ನಿಧನರಾಗಿದ್ದಾರೆ.


ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸಾಹಿತಿ ದಲಿತ ಕವಿ ಸಿದ್ದಲಿಂಗಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಇಂದು ಅವರ ಅಂತ್ಯ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಇನ್ನು, ಚೆಲುವಿನ ಚಿತ್ತಾರ ಖ್ಯಾತಿಯ ನಟ ಸುರೇಶ್ ಚಂದ್ರ ಕೂಡಾ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ