ಡ್ರಗ್ ಕೇಸ್: ಸಂಜನಾ, ರಾಗಿಣಿ ವಿರುದ್ಧ ಚಾರ್ಜ್ ಶೀಟ್ ರೆಡಿ

ಗುರುವಾರ, 5 ನವೆಂಬರ್ 2020 (11:11 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್ ವುಡ್ ತಾರೆಯರ ವಿರುದ್ಧ ಸಿಸಿಬಿ ಪೊಲೀಸರು ಕೋರ್ಟ್ ಗೆ ಸಲ್ಲಿಸಲು 180 ಪುಟಗಳ ಚಾರ್ಜ್ ಶೀಟ್ ರೆಡಿ ಮಾಡಿಕೊಂಡಿದ್ದಾರೆ.


ಇದನ್ನು ಎನ್ ಡಿಪಿಎಸ್ ಕೋರ್ಟ್ ಮುಂದೆ ಈ ತಿಂಗಳ ಅಂತ್ಯಕ್ಕೆ ಹಾಜರುಪಡಿಸಲಿದ್ದಾರೆ. ಸದ್ಯಕ್ಕೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ಸಂಜನಾ, ರಾಗಿಣಿ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇವರ ಜಾಮೀನು ಅರ್ಜಿಯನ್ನು ಇತ್ತೀಚೆಗಷ್ಟೇ ಹೈಕೋರ್ಟ್ ತಿರಸ್ಕರಿಸಿತ್ತು. ಚಾರ್ಜ್ ಶೀಟ್ ನಲ್ಲಿ ಸಂಜನಾ, ರಾಗಿಣಿ ಸೇರಿದಂತೆ ಇದುವರೆಗೆ ಪ್ರಕರಣದಲ್ಲಿ ಬಂಧಿತರಾದ 14 ಮಂದಿಯ ಹೆಸರು ಉಲ್ಲೇಖಿಸಲಾಗಿದೆ. ಈ ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ಡ್ರಗ್ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ