ಡ್ರಗ್ ಕೇಸ್: ವಿಚಾರಣೆ ಮುಗಿಸಿದ ಅನುಶ್ರೀ ಬಗ್ಗೆ ಪೊಲೀಸರು ಹೇಳಿದ್ದೇನು?

ಶನಿವಾರ, 26 ಸೆಪ್ಟಂಬರ್ 2020 (16:04 IST)
ಮಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಆಂಕರ್ ಅನುಶ್ರೀ ಮಂಗಳೂರಿನ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
 

ನಿನ್ನೆ ವಿಚಾರಣೆಗೆ ಹಾಜರಾಗದ ಅನುಶ್ರೀಗೆ ಇಂದು ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಲು ಸಿಸಿಬಿ ಸೂಚನೆ ನೀಡಿತ್ತು. ಅದರಂತೆ ಇಂದು ಮಧ್ಯಾಹ್ನ ವಿಚಾರಣೆಗೆ ಹಾಜರಾದ ಅನುಶ್ರೀಯನ್ನು ಸಿಸಿಬಿ ತಂಡ ವಿವಿಧ ಆಯಾಮಗಳಲ್ಲಿ ಪ್ರಶ್ನೆ ಕೇಳಿ ಸದ್ಯಕ್ಕೆ ತೆರಳಲು ಅನುಮತಿ ನೀಡಿದೆ. ವಿಚಾರಣೆ ಬಳಿಕ ಪತ್ರಿಕಾಗೋಷ್ಠಿ ಮಾಡಿರುವ ಮಂಗಳೂರು ಸಿಸಿಬಿ ಪೊಲೀಸರು ಅನುಶ್ರೀ ನೀಡಿದ ಹೇಳಿಕೆ ಆಧಾರದಲ್ಲಿ ತನಿಖೆ ನಡೆಸಲಾಗುವುದು. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ವಿಚಾರಣೆಗೆ ಕರೆಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ