ಡ್ರಗ್ಸ್ ಮಾಫಿಯಾ : ಕಾಂಗ್ರೆಸ್ ಸಂಸದ ಎಸೆದ ಹೊಸ ಬಾಂಬ್

ಬುಧವಾರ, 9 ಸೆಪ್ಟಂಬರ್ 2020 (17:51 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಜೋರಾಗಿ ಸದ್ದು ಮಾಡುತ್ತಿದೆ.

ನಟಿಯರಾದ ರಾಗಿಣಿ ಹಾಗೂ ಸಂಜನಾ ಈಗಾಗಲೇ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಡ್ರಗ್ಸ್ ಕೇಸ್ ಇಟ್ಟುಕೊಂಡು ಸರಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಆರೋಪ ಮಾಡಿದ್ದಾರೆ.

ಕೋವಿಡ್ -19 ನಿಂದಾಗಿ ಜನರು ಸಾಯುತ್ತಿದ್ದಾರೆ. ಆದರೆ ಸರಕಾರ ನಟ, ನಟಿಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಡೈವರ್ಟ್ ಮಾಡುತ್ತಿದೆ. ಡ್ರಗ್ಸ್ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ