ದುನಿಯಾ ವಿಜಯ್ ಜಾಮೀನು ಅರ್ಜಿಯ ವಿಚಾರಣೆ; ತೀರ್ಪನ್ನು ಕಾಯ್ದಿರಿಸಿದ ಕೋರ್ಟ್

ಮಂಗಳವಾರ, 25 ಸೆಪ್ಟಂಬರ್ 2018 (08:19 IST)
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರೂ ಕೂಡ ಎರಡು ದಿನಗಳ ಕಾಲ ಜೈಲು ವಾಸ ಅನುಭವಿಸಬೇಕಾಗಿದೆ.


ಜಿಮ್ ಟ್ರೈನರ್ ಮಾರುತಿ ಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದಕ್ಕೆ ನಟ ದುನಿಯಾ ವಿಜಯ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಸಂಬಂಧ  ನಟ ವಿಜಯ್ ಜಾಮೀನು ಕೋರಿ ಸೋಮವಾರ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.


ಸೋಮವಾರ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ದುನಿಯಾ ವಿಜಯ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಾಧೀಶ ಮಹೇಶ್ ಬಾಬು ಅವರು ಅರ್ಜಿಯ ವಿಚಾರಣೆ ನಡೆಸಿ, ತೀರ್ಪನ್ನು ಸೆ.26ಕ್ಕೆ ಕಾಯ್ದಿರಿಸಿದ್ದಾರೆ. ಆದ್ದರಿಂದ ನಟ ವಿಜಯ್ ಗೆ ಎರಡು ದಿನ ಜೈಲ್ಲಿನಲ್ಲೇ ಇರಬೇಕಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ