ನಟ ದುನಿಯಾ ವಿಜಯ್ ತಾಯಿ ಸ್ಥಿತಿ ಗಂಭೀರ

ಮಂಗಳವಾರ, 6 ಜುಲೈ 2021 (09:10 IST)
ಬೆಂಗಳೂರು: ನಟ ದುನಿಯಾ ವಿಜಯ್ ತಾಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಭಾವುಕರಾಗಿ ಮಾತನಾಡಿದ್ದಾರೆ.

 

ನಮ್ಮ ಅಮ್ಮ ಕೊನೆಯ ದಿನಗಳನ್ನು ಕಳೆಯುತ್ತಿದ್ದಾರೆ. ಅವರಿಗೆ ಸಲಗ ಸಿನಿಮಾ ತೋರಿಸಬೇಕೆಂದು ಆಸೆಯಿತ್ತು. ಆದರೆ ಅದು ಆಗಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ವಿಜಯ್ ಅಮ್ಮ ನಾರಾಯಣಮ್ಮ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿದ್ದು ಮನೆಯಲ್ಲಿಯೇ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಅವರ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಕೊವಿಡ್ ನಿಂದ ಚೇತರಿಸಿಕೊಂಡಿದ್ದ ಬೆನ್ನಲ್ಲೇ ಅವರಿಗೆ ಈ ಆಘಾತ ಸಿಕ್ಕಿದೆ. ದಿನೇ ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ವಿಜಯ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ