ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಸಾವಿನ ವದಂತಿ! ಸುಳ್ಳು ಸುದ್ದಿಗೆ ಏನಂದ್ರು ದ್ವಾರಕೀಶ್?

ಬುಧವಾರ, 17 ಜುಲೈ 2019 (09:23 IST)
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾಗಳಲ್ಲಿ ಸೆಲೆಬ್ರಿಟಿಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬುತ್ತಿರುವುದು ಸಾಮಾನ್ಯವಾಗಿಬಿಟ್ಟಿದೆ. ಇದೀಗ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಸಾವಿನ ಬಗ್ಗೆ ಸುಳ್ಳು ಸುದ್ದಿಯೊಂದು ಹಬ್ಬಿತ್ತು.


ಈ ವದಂತಿಗಳ ಹಿನ್ನಲೆಯಲ್ಲಿ ಸ್ವತಃ ದ್ವಾರಕೀಶ್ ವಿಡಿಯೋ ಸಂದೇಶ ನೀಡಿದ್ದು, ತಾನು ಆರೋಗ್ಯವಾಗಿದ್ದೇನೆ, ಯಾರೂ ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲಿ ನನಗೆ ಏನೋ ಆಗಿದೆ ಎಂದು ಸುದ್ದಿ ಹಬ್ಬುತ್ತಿದೆ. ಆದರೆ ನಿಮ್ಮ ಆಶೀರ್ವಾದದಿಂದ, ಗುರು ರಾಘವೇಂದ್ರ ಸ್ವಾಮಿಗಳ ಆಶೀರ್ವಾದದಿಂದ ನಾನು ಆರೋಗ್ಯವಾಗಿಯೇ ಇದ್ದೇನೆ. ಯಾರೂ ಆತಂಕಪಡಬೇಕಿಲ್ಲ. ಇಂತಹ ಸುದ್ದಿಗಳನ್ನು ನಂಬಬೇಡಿ ಎಂದು ದ್ವಾರಕೀಶ್ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ