Mahesh Babu: ಖ್ಯಾತ ನಟ ಮಹೇಶ್ ಬಾಬುಗೆ ಇಡಿ ನೋಟಿಸ್

Krishnaveni K

ಮಂಗಳವಾರ, 22 ಏಪ್ರಿಲ್ 2025 (09:10 IST)
ಹೈದರಾಬಾದ್: ಖ್ಯಾತ ತೆಲುಗು ನಟ ಮಹೇಶ್ ಬಾಬುಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಏಪ್ರಿಲ್ 28 ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.

ಸುರಾನಾ ಗ್ರೂಪ್ ಮತ್ತು ಸಾಯಿ ಸೂರ್ಯ ಡೆವಲಪರ್ಸ್ ಸಂಸ್ಥೆಯ ಪ್ರಚಾರಕ್ಕಾಗಿ 3.4 ಕೋಟಿ ರೂ. ತೆಗೆದುಕೊಂಡ ಪ್ರಕರಣದಲ್ಲಿ ಮಹೇಶ್ ಬಾಬುಗೆ ಇಡಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಸುರಾನ ಗ್ರೂಪ್, ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ಮಹೇಶ್ ಬಾಬು ತಮ್ಮ ಪತ್ನಿ, ಮಕ್ಕಳೊಂದಿಗೆ ಪಾಲ್ಗೊಂಡಿದ್ದರು.

ಸುರಾನ ಗ್ರೂಪ್ಸ್ ಮತ್ತು ಸಾಯಿ ಸೂರ್ಯ ಡೆವಲಪರ್ಸ್ ಸಂಸ್ಥೆಗಳಲ್ಲಿ ಸಾಕಷ್ಟು ಹಣಕಾಸು ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಮಹೇಶ್ ಬಾಬುಗೂ ನೋಟಿಸ್ ನೀಡಲಾಗಿದೆ. ಹೀಗಾಗಿ ಅವರು ಜಾಹೀರಾತಿನಲ್ಲಿ ಪಾಲ್ಗೊಂಡಿರುವ ಕಾರಣಕ್ಕೆ ಅವರಿಗೂ ನೋಟಿಸ್ ನೀಡಲಾಗಿದೆ.

ನೇರವಾಗಿ ಈ ಎರಡು ಸಂಸ್ಥೆಗಳ ಜೊತೆ ಮಹೇಶ್ ಬಾಬುಗೆ ಸಂಬಂಧ ಇಲ್ಲದೇ ಇದ್ದರೂ ಜಾಹೀರಾತಿನಲ್ಲಿ ಪಾಲ್ಗೊಂಡಿರುವ ಕಾರಣಕ್ಕಾದರೂ ವಿಚಾರಣೆ ಎದುರಿಸಲೇಬೇಕಿದೆ. ಏಪ್ರಿಲ್ 28 ರಂದು ಬೆಳಿಗ್ಗೆ 10.30 ಕ್ಕೆ ಹೈದರಾಬಾದ್ ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ