ರೊಚ್ಚಿಗೆದ್ದ ಶಿವಣ್ಣ ಅಭಿಮಾನಿಗಳು ಕುಮಾರ್ ಬಂಗಾರಪ್ಪ ಮನೆಗೆ ಮುತ್ತಿಗೆ

sampriya

ಶನಿವಾರ, 8 ಜೂನ್ 2024 (12:42 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಇಂದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ರಾಜ್ ಕುಮಾರ್ ಕುಟುಂಬದ ಬಗ್ಗೆ ಕುಮಾರ್‌ ಬಂಗಾರಪ್ಪ ಅವರು ಲಘುವಾಗಿ ಮಾತಾಡಿದ್ದಾರೆ. ಅದು ನಮಗೆ ನೋವಾಗಿದೆ.  ಅವರು ಮನೆಯಿಂದ ಹೊರಬಂದು ಕ್ಷಮೆ ಕೋರಬೇಕು ಎಂದು ಶಿವಣ್ಣ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಈಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್ ಅವರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ವೇಳೆ ಕುಮಾರ್‌ ಬಂಗಾರಪ್ಪ ಸಹೋದರಿ ಗೀತಾ ವಿರುದ್ಧ ಪ್ರಚಾರ ನಡೆಸಿದ್ದರು. ಚುನಾವಣೆಯಲ್ಲಿ ಗೀತಾ ಶಿವರಾಜ್‌ ಕುಮಾರ್ ಸೋತಿದ್ದರು.

 ಫಲಿತಾಂಶ ಪ್ರಕಟವಾದ ಬಳಿಕ ಶಿವಣ್ಣ ವಿರುದ್ಧ ಕುಮಾರ್‌ ಬಂಗಾರಪ್ಪ ಲಘುವಾಗಿ ಮಾತನಾಡಿದ್ದಾರೆ ಎಂಬುದು ಅಭಿಮಾನಿಗಳ ಆರೋಪವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ