ಹೈಕೋರ್ಟ್‌ನಲ್ಲಿ ಬೇಲ್ ಸಿಕ್ಕರೂ ದರ್ಶನ್‌ಗೆ ಮುಗಿಯದ ಸಂಕಷ್ಟ, ಬೆಂಗಳೂರು ಪೊಲೀಸರು ಸುಪ್ರೀಂ ಮೆಟ್ಟಿಲೇರಿದ್ದೇಕೆ

Sampriya

ಬುಧವಾರ, 22 ಜನವರಿ 2025 (19:01 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಮೂಲಕ ಹೊರ ಬಂದಿರುವ ನಟ ದರ್ಶನ್‌ಗೆ ಒಂದಲ್ಲ ಒಂದು ಸಂಕಷ್ಟ ತಪ್ಪಿದಲ್ಲ. ಇದೀಗ ಕೊಲೆ ಪ್ರಕರಣ ಆರೋಪಿ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಕೋರಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ ಎಲ್ಲವನ್ನೂ ಸೇರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನೂ ಪ್ರಕರಣ ಸಂಬಂಧ ತನಿಖೆಯಲ್ಲಿ ಕಲೆ ಹಾಕಿದ ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿಯನ್ನು ಲಗತ್ತಿಸಲಾಗಿದೆ.

ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ  ಒಟ್ಟು 1492 ಪುಟಗಳ ಕಡತವನ್ನು  ಕೋರ್ಟ್‌ಗೆ ನೀಡಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ