ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ ಗೆ ಇಂದು ಪತ್ನಿಯನ್ನು ಭೇಟಿ ಮಾಡುವ ಯೋಗ. ಇಂದು ಕುಟುಂಬಸ್ಥರ ಭೇಟಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಗುರುವಾರ ಸಂಜೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಮರ್ಡರ್ ಪ್ರಕರಣದ ಪ್ರಮುಖ 7 ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದರು. ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ 7 ಮಂದಿಯನ್ನು ಮತ್ತೆ ಜೈಲಿಗೆ ಕಳುಹಿಸಲಾಗಿದೆ.
ಈಗ ಎಲ್ಲಾ ಆರೋಪಿಗಳೂ ಪರಪ್ಪನ ಅಗ್ರಹಾಋ ಜೈಲಿನಲ್ಲಿದ್ದಾರೆ. ಕಳೆದ ಎರಡು ದಿನಗಳಿಂದ ಸರ್ಕಾರೀ ರಜೆಯಿದ್ದಿದ್ದರಿಂದ ದರ್ಶನ್ ಆಂಡ್ ಗ್ಯಾಂಗ್ ಗೆ ಕುಟುಂಬಸ್ಥರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಇದರಿಂದಾಗಿ ಜೈಲಿನಲ್ಲಿಯೇ ಡಿ ಗ್ಯಾಂಗ್ ಪರದಾಡಿತ್ತು.
ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ತಾಯಿ ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಆದರೆ ಈ ಬಾರಿ ದರ್ಶನ್ ಆಂಡ್ ಗೆ ಯಾವುದೇ ವಿಐಪಿ ಟ್ರೀಟ್ಮೆಂಟ್ ಸಿಗದಂತೆ ಎಚ್ಚರಿಕೆ ವಹಿಸಲಾಗಿದೆ. ಆದರೆ ಜೈಲು ನಿಯಮದ ಪ್ರಕಾರ ಕುಟುಂಬಸ್ಥರ ಭೇಟಿಗೆ ಅವಕಾಶ ಸಿಗಲಿದೆ.