ಕಿಚ್ಚ ನೀವೇ ಹೇಳಿ ನಿಮ್ಮ ಮುಂದಿನ ಸಿನಿಮಾ ಯಾವಾಗ?!

ಮಂಗಳವಾರ, 21 ಮಾರ್ಚ್ 2023 (08:50 IST)
Photo Courtesy: Twitter
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಂತೇ ಕಿಚ್ಚ ಸುದೀಪ್ ಅಭಿಮಾನಿಗಳೂ ಅವರ ಮುಂದಿನ ಸಿನಿಮಾ ಘೋಷಣೆ ಯಾವಾಗ ಎಂದು ಕಾಯುತ್ತಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿದ್ದ ಕಳೆದ ಜುಲೈನಲ್ಲಿ. ಅದಾದ ಬಳಿಕ ಕಿಚ್ಚ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದ ಕಬ್ಜ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿತ್ತು. ಅದು ಬಿಟ್ಟರೆ ಕಿಚ್ಚನಿಂದ ಹೊಸ ಸಿನಿಮಾ ಬಗ್ಗೆ ಯಾವುದೇ ಅಪ್ ಡೇಟ್ ಸಿಕ್ಕಿರಲಿಲ್ಲ.

ಹೀಗಾಗಿ ಅಭಿಮಾನಿಗಳು ಈಗ ಕಿಚ್ಚ ಸುದೀಪ್ ಗೆ ಕಿಚ್ಚ 46 ಯಾವಾಗ ಘೋಷಣೆ ಮಾಡ್ತೀರಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಟ್ರೆಂಡ್ ಸೃಷ್ಟಿಸಿ ಪ್ರಶ್ನೆ ಮಾಡುತ್ತಿದ್ದಾರೆ. ಸದ್ಯಕ್ಕೆ ಕಿಚ್ಚ ಸಿಸಿಎಲ್ ಕ್ರಿಕೆಟ್ ನಲ್ಲಿ ಬ್ಯುಸಿಯಾಗಿದ್ದು, ಅದಾದ ಬಳಿಕ ಸಿನಿಮಾ ಬಗ್ಗೆ ಗಮನಕೇಂದ್ರೀಕರಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ