ಕೊನೆಗೂ ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ಬಿಡುಗಡೆಗೆ ಮುಹೂರ್ತ ಪಿಕ್ಸ್
ಇದೀಗ ರಾಜ ಮಾರ್ತಂಡ ಸಿನಿಮಾ ಬಿಡುಗಡೆಗೆ ಮುಹೂರ್ತ ಕೂಡಿಬಂದಿದೆ. ಅಕ್ಟೋಬರ್ 6 ರಂದು ಧ್ರುವ ಸರ್ಜಾ ಹುಟ್ಟುಹಬ್ಬದಂದು ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ಬಿಡುಗಡೆಯಾಗಲಿದೆ.
ಈ ಸಿನಿಮಾದಲ್ಲಿ ಚಿರು ಸರ್ಜಾ ನಟನೆ ಮಾತ್ರ ಮಾಡಿದ್ದರು. ಅವರಿಗೆ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಲು ಆಗಿರಲಿಲ್ಲ. ಹೀಗಾಗಿ ಅಣ್ಣನ ಪಾತ್ರಕ್ಕೆ ತಮ್ಮ ಧ್ರುವ ಡಬ್ ಮಾಡಿದ್ದರು. ಅಣ್ಣನ ಮೇಲೆ ಧ್ರುವಗೆ ಎಲ್ಲಿಲ್ಲದ ಪ್ರೀತಿ. ಇದೇ ಕಾರಣಕ್ಕೆ ಧ್ರುವ ಹುಟ್ಟುಹಬ್ಬದಂದೇ ಚಿರು ಸರ್ಜಾ ಸಿನಿಮಾ ಬಿಡುಗಡೆಯಾಗುತ್ತಿದೆ.