ಸಿಂಗಾಪುರದ ಶಾಲೆಯಲ್ಲಿ ಅಗ್ನಿ ದುರಂತ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಪುತ್ರನ ಸ್ಥಿತಿ ಹೇಗಿದೆ ಗೊತ್ತಾ

Sampriya

ಮಂಗಳವಾರ, 8 ಏಪ್ರಿಲ್ 2025 (14:29 IST)
Photo Courtesy X
‌ಸಿಂಗಾಪುರ: ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರ ಕಿರಿಯ ಪುತ್ರ ಮಾರ್ಕ್ ಶಂಕರ್ ಎಂಬಾತ ಸಿಂಗಾಪುರ ಶಾಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದಾನೆ.

ದುರ್ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದೆ. ಅಲ್ಲದೆ, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಅವರು ಸಿಂಗಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪವನ್ ಕಲ್ಯಾಣ್ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಅವರಿಗೆ ಇಬ್ಬರು ಮಕ್ಕಳು ಮಾರ್ಕ್ ಶಂಕರ್ ಮತ್ತು ಪೊಲೇನಾ ಅಂಜನಾ. ಈ ಇಬ್ಬರೂ ಸಹ ಸಿಂಗಾಪುರದಲ್ಲಿ ನೆಲೆಸಿದ್ದಾರೆ. ಅಲ್ಲಿನ ಶಾಲೆಯಲ್ಲಿ ಓದುತ್ತಿದ್ದಾರೆ.

 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ ಹೆಂಡತಿ ಅನ್ನಾ ಸಿಂಗಪುರದಲ್ಲೇ ಇದ್ದಾರೆ. ಮಾರ್ಕ್ ಶಂಕರ್ ಕೂಡ ಸಿಂಗಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಆಂಧ್ಯಪ್ರದೇಶದಲ್ಲಿ ಉಪ ಮುಖ್ಯಮಂತ್ರಿ, ಟಾಲಿವುಡ್‌ ಸ್ಟಾರ್‌ ಪವನ್ ಕಲ್ಯಾಣ್ ಅವರು, ಆಂಧ್ರ ಪ್ರದೇಶದಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ