ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಶುಕ್ರವಾರ, 7 ಜುಲೈ 2023 (09:23 IST)
ಬೆಂಗಳೂರು: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಇಂದು ಅಭಿಮಾನಿಗಳೊಂದಿಗೆ ಜನ್ಮದಿನ ಆಚರಿಸಿಕೊಳ್ಳಲಿದ್ದು, ಅದಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.

ಇಂದು ಅಪರಾಹ್ನ 3 ಗಂಟೆಯಿಂದ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಅಭಿಮಾನಿಗಳನ್ನು ಭೇಟಿಯಾಗುವುದಾಗಿ ರಿಷಬ್ ಶೆಟ್ಟಿ ಈಗಾಗಲೇ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಎಲ್ಲಾ ಉಸ್ತುವಾರಿ ನಟ ಪ್ರಮೋದ್ ಶೆಟ್ಟಿ ನಿರ್ವಹಿಸುತ್ತಿದ್ದಾರೆ. ಹಲವು ಊರುಗಳಿಂದ ಡಿವೈನ್ ಸ್ಟಾರ್ ನೋಡಲು ಬರುವ ಅಭಿಮಾನಿಗಳಿಗಾಗಿ ಮಧ‍್ಯಾಹ್ನ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ತಮಗೆ ಇಷ್ಟರಮಟ್ಟಿಗೆ ಯಶಸ್ಸು ತಂದುಕೊಟ್ಟ ಅಭಿಮಾನಿಗಳಿಗೆ ರಿಷಬ್ ಈ ರೀತಿ ಕೃತಜ್ಞತೆ ವ್ಯಕ್ತಪಡಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ