ಭಾರತದಲ್ಲಿ ಪಾಕಿಸ್ತಾನದ ಕಲಾವಿದರಿಗೆ ನಿಷೇಧ ಪ್ರಸ್ತಾಪಕ್ಕೆ ಪವರ್ ಸ್ಟಾರ್ ಪುನೀತ್ ರಾಜಕುಮಾರ ಬೆಂಬಲ ವ್ಯಕ್ತಪಡಿಸಿದ್ದು, ನಮಗೆ ಕಲೆಗಿಂತ ದೇಶ ದೊಡ್ಡದು ಎಂದು ಹೇಳಿದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೂ ನಾವು ಭಾರತೀಯರು, ನಂತರ ಕಲಾವಿದರು. ನಮಗೆ ಕಲೆಗಿಂತ ದೇಶ ದೊಡ್ಡದು. ದೇಶಕ್ಕೆ ಒಳ್ಳೆಯದಾಗುವ ಕೆಲಸಕ್ಕೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸ್ಪಂದನೆ ನೀಡಿದ ಹಾಗೇ ಕನ್ನಡ ಚಿತ್ರರಂಗ ಮಹದಾಯಿ ವಿವಾದಕ್ಕೂ ಬೆಂಬಲ ವ್ಯಕ್ತಪಡಿಸಿದೆ ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ