ರಶ್ಮಿಕಾ ಮಂದಣ್ಣ ಡೀಪ್ ಫೇಕ್ ಕೇಸ್: ನಾಲ್ವರನ್ನು ಬಂಧಿಸಿದ ಪೊಲೀಸರು
ಕೇವಲ ರಶ್ಮಿಕಾ ಮಾತ್ರವಲ್ಲ, ಅನೇಕ ನಟಿಯರು, ಸೆಲೆಬ್ರಿಟಿಗಳ ವಿಡಿಯೋವನ್ನು ನಕಲಿ ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದೀಗ ರಶ್ಮಿಕಾ ವಿಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹರಿಯಬಿಟ್ಟ ಸಂಶಯದ ಮೇರೆಗೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ವಿಡಿಯೋ ಸೃಷ್ಟಿಸಿದ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.