ಪುನೀತ್ ನಮನ ಕಾರ್ಯಕ್ರಮದಲ್ಲಿ ವಂಚನೆ ಆರೋಪ

ಭಾನುವಾರ, 7 ನವೆಂಬರ್ 2021 (10:44 IST)
ಬೆಂಗಳೂರು: ಕರ್ನಾಟಕ ವಾಣಿಜ್ಯ ಮಂಡಳಿ ನವಂಬರ್ 16 ರಂದು ಆಯೋಜಿಸಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ವಂಚನೆ ಆರೋಪ ಕೇಳಿಬಂದಿದೆ.

ಪುನೀತ್ ನಮನ ಕಾರ್ಯಕ್ರಮದ ಹೆಸರಿನಲ್ಲಿ ಮಂಡಳಿ ಸದಸ್ಯರು ಕೆಲವರು ವೈಯಕ್ತಿಕ ಖಾತೆಗೆ ಚಂದಾ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ.

ಈ ಬಗ್ಗೆ ವಾಣಿಜ್ಯ ಮಂಡಳಿ ಪ್ರತಿಕ್ರಿಯೆ ನೀಡಿದ್ದು, ಈ ಕಾರ್ಯಕ್ರಮಕ್ಕೆ ಯಾರಿಂದಲೂ ಹಣ ಸಂಗ್ರಹಿಸುತ್ತಿಲ್ಲ. ಕಾರ್ಯಕ್ರಮ ನಡೆಸುವಷ್ಟು ಹಣ ನಮ್ಮಲ್ಲಿಲ್ಲ. ಯಾರ ಹಣವೂ ನಮಗೆ ಬೇಕಾಗಿಲ್ಲ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ