ಬೆಂಗಳೂರು: ಥಗ್ ಲೈಫ್ ಇನ್ನೇನು ಸಿನಿಮಾ ಬಿಡುಗಡೆಯಾಗಬೇಕೆನ್ನುಷ್ಟರಲ್ಲಿ ಕಾಲಿವುಡ್ ನಟ ಕಮಲ್ ಹಾಸನ್ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಇಂದು (ಮೇ 27) ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರು ರಾಂಗ್ ಆಗಿದ್ದಾರೆ.
ಅದಲ್ಲದೆ ಈ ಹೇಳಿಕೆಯನ್ನು ನಟ ಶಿವರಾಜ್‌ಕುಮಾರ್ ಎದುರೇ ನೀಡಿದ್ದು, ಈ ವೇಳೆ ಶಿವಣ್ಣ ಮೌನವಹಿಸುರವ ಬಗ್ಗೆಯೂ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.
kamal haasanಬೆಂಗಳೂರಿನಲ್ಲಿ ನಡೆದ ಥಗ್ ಲೈಫ್ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು.
ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದ್ದಾರೆ.
ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಕೆಂಡ ಕಾರಿದ್ದಾರೆ.