Gold Smuggling Case: ನಟಿ ರನ್ಯಾ ರಾವ್ ವಿರುದ್ಧ ಸಿಬಿಐನಿಂದ ಪ್ರತ್ಯೇಕ FIR

Sampriya

ಶನಿವಾರ, 8 ಮಾರ್ಚ್ 2025 (14:20 IST)
ಬೆಂಗಳೂರು: ದುಬೈನಿಂದ 12ಕೋಟಿ ಮೌಲ್ಯದ 15ಕೆಜಿ ತೂಕದ ಚಿನ್ನವನ್ನು ಕಳ್ಳಸಾಗಣೆ ಮಾಡುವ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಕರಣ ದಾಖಲಿಸಿಕೊಂಡಿದೆ. ಈ ಮೂಲಕ ನಟಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈಚೆಗೆ ನಟಿ ರನ್ಯಾ ರಾವ್ ಅವರನ್ನು 12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನದೊಂದಿಗೆ ಬಂಧಿಸಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನೊಂದಿಗೆ ಸಿಬಿಐ ನಿಕಟ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ.

ಗೋಲ್ಡ್ ಸ್ಮಗ್ಲಿಂಗ್‌ನ ಸಿಂಡಿಕೇಟ್‌ನ ಪತ್ತೆ ಹಚ್ಚಲು ಸಿಬಿಐ ಮುಂದಾಗಿದೆ.  ಅಗತ್ಯ ಮಾಹಿತಿಯನ್ನು ಸಂಗ್ರಹಿಸಲು ಎರಡು ಸಿಬಿಐ ತಂಡಗಳು ಈಗಾಗಲೇ ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ತಲುಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ