ಶೂಟಿಂಗ್ ಮುಗಿಸಿದ ಗೋಲ್ಡನ್ ಸ್ಟಾರ್ ಗಣೇಶ್ ತ್ರಿಬಲ್ ರೈಡಿಂಗ್

ಭಾನುವಾರ, 19 ಸೆಪ್ಟಂಬರ್ 2021 (12:40 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ತ್ರಿಬಲ್ ರೈಡಿಂಗ್’ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಈ ಬಗ್ಗೆ ಚಿತ್ರತಂಡ ಪ್ರಕಟಣೆ ನೀಡಿದೆ.
Photo Courtesy: Twitter


ಗಣೇಶ್ ಅಭಿನಯದ ಗಾಳಿಪಟ 2 ಚಿತ್ರೀಕರಣ ಮರು ಪ್ರಾರಂಭವಾಗುತ್ತಿರುವ ಹೊತ್ತಿನಲ್ಲೇ ತ್ರಿಬಲ್ ರೈಡಿಂಗ್ ಸಿನಿಮಾ ಶೂಟಿಂಗ್ ಮುಗಿದಿದೆ.

ಈ ಸಿನಿಮಾದಲ್ಲಿ ಗಣೇಶ್ ಜೊತೆಗೆ ‘ಜೊತೆ ಜೊತೆಯಲಿ’ ಧಾರವಾಹಿ ಖ್ಯಾತಿಯ ಮೇಘಾ ಶೆಟ್ಟಿ, ಅದಿತಿ ಪ್ರಭುದೇವ, ರಚನಾ ಇಂದರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮಹೇಶ‍್ ಗೌಡ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ